Scholorship
ರಾಜ್ಯದ ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ(Pre Matric Students) ಗುಡ್ ನ್ಯೂಸ್ ಎನ್ನುವಂತೆ ವಿದ್ಯಾರ್ಥಿ ವೇತನವನ್ನು(Student stipend) ರೂ.750 ರಿಂದ ರೂ.1,750 ಕ್ಕೆ ಹೆಚ್ಚಳ(increase) ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ(CM Siddaramaiah) ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಮ್ಮ ಸಂವಿಧಾನ(Constitution) ಜಾರಿಯಾಗುವ ಮೊದಲೇ ಮೈಸೂರು ರಾಜ್ಯದಲ್ಲಿ(Mysore State) ನಾಲ್ವಡಿ ಕೃಷ್ಣರಾಜ ಒಡೆಯರ್(Nalvadi Krishnaraja Wodeyar) ಅವರ ಆಡಳಿತದಲ್ಲಿ ಮೀಸಲಾತಿ(reservation)ಯನ್ನು ಜಾರಿಗೆ ತರಲಾಗಿತ್ತು.
1960 ರಲ್ಲಿ ನಾಗೇಗೌಡ ಸಮಿತಿ(Nagegowda Committee) ರಚನೆಯಾಯಿತು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾವನೂರು ಆಯೋಗ ರಚಿಸಲಾಯಿತು. ವರದಿಗೆ ವಿರೋಧದ ನಡುವೆಯೂ ಜಾರಿಗೆ ತರಲಾಯಿತು.
1977 ರಲ್ಲಿ ಹಿಂದುಳಿದ ವರ್ಗಗಳ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಯಿತು ವಿದ್ಯಾರ್ಥಿನಿಲಯಗಳಲ್ಲಿ ಶೇ.75 ರಷ್ಟು ಹಿಂದುಳಿದ ಜಾತಿಗಳ ಮಕ್ಕಳಿದ್ದರೆ, ಶೇ.25 ರಷ್ಟು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮಕ್ಕಳಿದ್ದಾರೆ. 1,87,000 ವಿದ್ಯಾರ್ಥಿಗಳು ಇಂದು ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದರು.
ವಿದ್ಯಾರ್ಥಿದೆಸೆಯಲ್ಲಿನ ಸಂಕಷ್ಟಗಳನ್ನು ಸ್ಮರಿಸಿಕೊಂಡು ಸಿಎಂ
ನಾನು ಓದುವಾಗ ಮೀಸಲಾತಿ ವ್ಯವಸ್ಥೆ ಇಲ್ಲದಿದ್ದ ಕಾರಣ, ಉನ್ನತ ಶಿಕ್ಷಣಕ್ಕೆ ಅವಕಾಶ ದೊರಕಲಿಲ್ಲ. ಪಿಯುಸಿ, ಪದವಿ ಮಾಡುವ ಸಂದರ್ಭದಲ್ಲಿ ವಸತಿ ವ್ಯವಸ್ಥೆ ಇಲ್ಲದೇ, ನಾನೇ ಒಂದು ರೂಂ ಮಾಡಿಕೊಂಡು ಓದುತ್ತಿದ್ದೆ. ಆದ್ದರಿಂದ ವಿದ್ಯಾರ್ಥಿಗಳ ಕಷ್ಟಗಳ ಬಗ್ಗೆ ಅರಿತಿದ್ದ ನಾನು ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತಂದಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಕಾನೂನು ಪದವಿ ಓದಲು ತಾನು ಮಾಡಿದ ಸಂಘರ್ಷಗಳನ್ನೂ ವಿವರಿಸಿದರು.
ವಿದ್ಯಾರ್ಥೀ ವೇತನ ಹೆಚ್ಚಳ
ವಿದ್ಯಾರ್ಥಿ ನಿಲಯಗಳಲ್ಲಿ ಪೌಷ್ಟಿಕ ಆಹಾರ ದೊರಕಿಸುವ ಉದ್ದೇಶದಿಂದ ಪ್ರೀಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಳ ಮಾಡಿದೆ. ಹೀಗೆ ಐದು ವರ್ಷವೂ ಕೂಡ ವಿದ್ಯಾರ್ಥಿ ವೇತನವನ್ನು ಹಂತ ಹಂತವಾಗಿ ಹೆಚ್ಚಿಸಲಾಗಿ, ಮುಂಚೆ ಇದ್ದ 750 ರೂ ವಿದ್ಯಾರ್ಥಿ ವೇತನವನ್ನು 1750 ರೂ.ಗಳಿಗೆ ಹೆಚ್ಚಿಸಲಾಗಿದೆ.
ಹಾಸ್ಟೆಲ್ ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಲಭಿಸಿದಾಗ ಮಾತ್ರ ಉತ್ತಮ ಜ್ಞಾನಾರ್ಜನೆ ಮಾಡಲು ಸಾಧ್ಯ. 2024-25 ರಲ್ಲಿಯೂ ಕೂಡ ವಿದ್ಯಾರ್ಥಿ ವೇತನವನ್ನು 1850 ರೂ.ಗಳಿಗೆ ಪುನ: ಹೆಚ್ಚಿಸಲಾಗಿದೆ ಎಂದು ವಿವರಿಸಿದರು.
ಅರ್ಜಿ ಸಲ್ಲಿಸಲು ಅರ್ಹತೆಗಳು
– ವಿದ್ಯಾರ್ಥಿಗಳು 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಾಗಿರಬೇಕು.
– ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಾಗಿರಬೇಕು.
– ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು.
– ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ / ಪಾಲಕರ / ಪೋಷಕರ ವಾರ್ಷಿಕ ಆದಾಯವು ರೂ.1.00 ಲಕ್ಷಗಳನ್ನು ಮೀರಿರಬಾರದು.
ಇನ್ನೂ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು, 2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 1ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ಅಕ್ಟೋಬರ್ 31ರ ಒಳಗಾಗಿ ಅಪ್ಲೈ ಮಾಡಬಹುದು.
ಅರ್ಜಿ ಸಲ್ಲಿಕೆಗೆ ವೆಬ್‌ಸೈಟ್ ಲಿಂಕ್: https://ssp.postmatric.karnataka.gov.in/
ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್‌ಗೆ (https://dom.karnataka.gov.in) ಭೇಟಿ ನೀಡಬಹುದು. ಇದೇ ವೇಳೆ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.