ಪ್ರತಿ ವರ್ಷ ದೇಶದಾದ್ಯಂತ ಇರುವ ಕೇಂದ್ರ ಸರ್ಕಾರದ ಹಲವಾರು ಕಚೇರಿಗಳಲ್ಲಿ ಹಾಗೂ ಇಲಾಖೆ ಸಚಿವಾಲಯಗಳಲ್ಲಿ ಸೇರಿದಂತೆ ಗ್ರೂಪಿಗೆ ಬಿ ಮತ್ತು ಗ್ರೂಪ್ ಸಿ ವೃಂದ ಹಾಗೂ ಇನ್ನಿತರ ವಿಭಾಗಕ್ಕೆ ಸಂಬಂಧಪಟ್ಟ ಹಾಗೆ ವಾರ್ಷಿಕವಾಗಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಮುಂಬಡ್ತಿ ಹೊಂದುವ, ವಯೋನಿವೃತ್ತಿ, ಸ್ವಯಂ ನಿವೃತ್ತಿ ಮತ್ತು ಮ.ರಣ ಹೊಂದಿದ ಕಾರಣಕ್ಕಾಗಿ ಇನ್ನಷ್ಟು ಉದ್ಯೋಗಗಳು ತೆರವಾಗುತ್ತದೆ.
ಈ ಖಾಲಿಯಾದ ಸ್ಥಳಗಳಿಗೆ ದೇಶದ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕ ಮಾಡುವ ಜವಾಬ್ದಾರಿಯನ್ನು ಸ್ಟಾಫ್ವ ಸೆಲೆಕ್ಷನ್ ಕಮಿಷನ್ ಸಂಸ್ಥೆ ಹೊತ್ತುಕೊಂಡಿದೆ. ಪ್ರತಿವರ್ಷವೂ ಕೂಡ ಹಂತ ಹಂತವಾಗಿ ಜವಾಬ್ದಾರಿ ಹಾಗೂ ಪ್ರಾಮಾಣಿಕತೆಯಿಂದ ನ್ಯಾಯಬದ್ಧವಾಗಿ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಕಾರ್ಯ ನಿರ್ವಹಿಸುತ್ತದೆ.
ಇದಕ್ಕಾಗಿ ನೋಟಿಫಿಕೇಶನ್ ಕೂಡ ಹೊರಡಿಸಿ ಯಾವ ಬಗೆಯ ಹುದ್ದೆಗಳು ಖಾಲಿ ಇದೆ, ಶೈಕ್ಷಣಿಕ ಹಾಗೂ ವಯೋಮಾನ ಮಾನದಂಡಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಆಯ್ಕೆ ಪ್ರಕ್ರಿಯೆ ಯಾವ ರೀತಿ ನಡೆಯುತ್ತದೆ? ಅರ್ಜಿ ಶುಲ್ಕ ಏನಿರುತ್ತದೆ ಮತ್ತು ಇದಕ್ಕೆ ಸಂಬಂಧಪಟ್ಟ ದಿನಾಂಕಗಳ ಟೈಮ್ ಟೇಬಲ್ ಕೂಡ ನೀಡುತ್ತದೆ. ಅದೇ ರೀತಿ 2024-05ನೇ ಸಾಲಿನಲ್ಲೂ ಕೂಡ ಸುಮಾರು 17000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು ಇದಕ್ಕೆ ಸಂಬಂಧಿಸಿದ ಹಾಗೆ ಪ್ರಕಟಣೆ ಹೊರಡಿಸಿದೆ.
ದೇಶದಾದ್ಯಂತ ಇರುವ ಎಲ್ಲಾ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ವೃತ್ತಿಗಳಿಗೆ ಅರ್ಜಿ ಸಲ್ಲಿಸಿ ಪ್ರಯತ್ನಿಸಬಹುದು. ಉದ್ಯೋಗಾಸಕ್ತರಿಗೆಲ್ಲರಿಗೂ ಅನುಕೂಲವಾಗಲಿ ಎನ್ನುವ ಕಾರಣಕ್ಕಾಗಿ ನಾವು ಸಹ ಈ ಲೇಖನದಲ್ಲಿ ಅಧಿಸೂಚನೆಯಲ್ಲಿ ಇರುವ ಎಲ್ಲಾ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ. ತಪ್ಪದೇ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ನೇಮಕಾತಿ ಸಂಸ್ಥೆ:- ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಉದ್ಯೋಗ ಸಂಸ್ಥೆ:- ಭಾರತ ಸರ್ಕಾರದ ವಿವಿಧ ಕಛೇರಿಗಳು ಹಾಗೂ ಸಚಿವಾಲಯಗಳು
ಹುದ್ದೆ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
* ಗ್ರೂಪ್ ಬಿ ಹುದ್ದೆಗಳು
* ಗ್ರೂಪ್ ಸಿ ಹುದ್ದೆಗಳು
ಉದ್ಯೋಗ ಸ್ಥಳ:-
ಈ ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಭಾರತದ ವಿವಿಧ ಇಲಾಖೆ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ವೇತನ ಶ್ರೇಣಿ:-
* ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ. 25,500 ರಿಂದ ರೂ. 1,42,400 ರವರೆಗೂ ವೇತನ ಇರುತ್ತದೆ.
* ಇದರೊಂದಿಗೆ ಇನ್ನಿತರ ಸರ್ಕಾರಿ ಸೌಲಭ್ಯಗಳು ಸಿಗುತ್ತವೆ
ಶೈಕ್ಷಣಿಕ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಯಾವುದಾದರೂ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಗರಿಷ್ಠ ವಯೋಮಿತಿ ಗ್ರೂಪ್ ಬಿ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 30 ವರ್ಷ
* ಗರಿಷ್ಠ ಗ್ರೂಪ್ ಸಿ ಹುದ್ದೆಗಳಿಗೆ ಗರಿಷ್ಠ ವಯೋಮಿತಿ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ:-
* SC / ST ಅಭ್ಯರ್ಥಿಗಳಿಗೆ – 05 ವರ್ಷ
* OBC ಅಭ್ಯರ್ಥಿಗಳಿಗೆ – 03 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಸಲ್ಲಿಸುವ ವಿಧಾನ:-
* SSC ಅಧಿಕೃತ ವೆಬ್ ಸೈಟ್ ಗೆ ತೆರಳಿ ಅರ್ಜಿ ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
* SC/ST, ಅಂಗವಿಕಲ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ
* ಉಳಿದ ಅಭ್ಯರ್ಥಿಗಳು ರೂ. 100 ಶುಲ್ಕವನ್ನು ಪಾವತಿಸಬೇಕು
* ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, UPI ಆಪ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ:-
* ಕಂಪ್ಯೂಟರ್ ಆಧಾರಿತ ಪೇಪರ್-1 ಮತ್ತು ಪೇಪರ್-2 ಪರೀಕ್ಷೆ
* ನೇರ ಸಂದರ್ಶನ
* ದಾಖಲೆಗಳ ಪರಿಶೀಲನೆ
ಪರೀಕ್ಷಾ ಕೇಂದ್ರಗಳು (ಕರ್ನಾಟಕದಲ್ಲಿ) :-
* ಬೆಳಗಾವಿ
* ಬೆಂಗಳೂರು
* ಹುಬ್ಬಳ್ಳಿ
* ಕಲಬುರಗಿ
* ಮಂಗಳೂರು
* ಮೈಸೂರು
* ಶಿವಮೊಗ್ಗ
* ಉಡುಪಿ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ – ಜೂನ್ 24, 2024
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – ಜುಲೈ 24, 2024
* ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜುಲೈ 25, 2024
* ಕಂಪ್ಯೂಟರ್ ಆಧಾರಿತ ಪರೀಕ್ಷೆ ( ಪೇಪರ್ -1) : ಸೆಪ್ಟೆಂಬರ್-ಅಕ್ಟೋಬರ್, 2024
* ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್ -2) : ಡಿಸೆಂಬರ್, 2024