Stenographer
ಕರ್ನಾಟಕ ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಈ ಲೇಖನದ ಮೂಲಕ ಉದ್ಯೋಗ ಮಾಹಿತಿಯೊಂದನ್ನು ತಿಳಿಸಿ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರದ ವಿವಿಧ ಕಚೇರಿ ಹಾಗೂ ಇಲಾಖೆಯಲ್ಲಿ ಖಾಲಿ ಇರುವಂತಹ ಶೀಘ್ರಲಿಪಿಕಾರ ಹುದ್ದೆಗಳಿಗೆ (Stenographer) ಬೃಹತ್ ನೇಮಕಾತಿ ನಡೆಯುತ್ತಿದ್ದು ಕರ್ನಾಟಕವು ಸೇರಿದಂತೆ ವಿವಿಧ ಭಾಗಗಳಲ್ಲಿ ಉದ್ಯೋಗ ಮಾಡುವ ಅವಕಾಶ ಸಿಗುತ್ತದೆ.
ಈ ಸುದ್ದಿ ಓದಿ:- Ration Card cancellation: ರಾಜ್ಯದಲ್ಲಿ 50 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಆದೇಶ.! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದಿಯೇ ಚೆಕ್ ಮಾಡಿಕೊಳ್ಳಿ.!
ಕೇಂದ್ರ ಸರ್ಕಾರದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ವಿವಿಧ ಬಗೆಯ ಪರೀಕ್ಷೆಗಳನ್ನು ನಡೆಸಿ ನೇಮಕಾತಿ ಮಾಡುವ ಸಂಸ್ಥೆಗಳಲ್ಲಿ ಒಂದಾದ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಈ ಹುದ್ದೆಗಳ ನೇಮಕಾತಿ ಜವಾಬ್ದಾರಿ ಹೊತ್ತುಕೊಂಡಿದೆ. ರಾಜ್ಯದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ಪಡೆದುಕೊಳ್ಳಲಿ ಎನ್ನುವ ಉದ್ದೇಶದಿಂದ ನೇಮಕಾತಿಗೆ ಸಂಬಂಧಪಟ್ಟ ಹಾಗೆ ಪ್ರಕಟಣೆಯಲ್ಲಿರುವ ಪ್ರಮುಖ ಸಂಗತಿಗಳನ್ನು ವಿವರಿಸುತ್ತಿದ್ದೇವೆ. ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- Free Laptop: SSLC ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ.!
ನೇಮಕಾತಿ ಸಂಸ್ಥೆ:- ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆ ಹೆಸರು:- ಸ್ಟೆನೋಗ್ರಾಫರ್ ಹುದ್ದೆಗಳು
ಹುದ್ದೆಗಳ ವಿವರ:-
* ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗಳು (Group C)
* ಸ್ಟೆನೋಗ್ರಾಫರ್ ಗ್ರೇಡ್ ಡಿ ಹುದ್ದೆಗಳು (Group D)
ಒಟ್ಟು ಹುದ್ದೆಗಳ ಸಂಖ್ಯೆ:- 2006 ಹುದ್ದೆಗಳು
ಉದ್ಯೋಗ ಸ್ಥಳ:- ಈ ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಥವಾ ಸಚಿವಾಲಯದಲ್ಲಿ ಹುದ್ದೆ ನಿರ್ವಹಿಸಲು ಸಿದ್ಧವಿರಬೇಕು
ಶೈಕ್ಷಣಿಕ ವಿದ್ಯಾರ್ಹತೆ:-
* ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ 12ನೇ ತರಗತಿ ಅಥವಾ ಇದಕ್ಕೆ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು
* ನಿಗದಿತ ಟೈಪಿಂಗ್ ಮತ್ತು ಸ್ಟೆನೋಗ್ರಾಫರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ
1. ಸ್ಟೆನೋಗ್ರಾಫರ್ (ಗ್ರೇಡ್ ಸಿ) ಹುದ್ದೆಗಳಿಗೆ 30 ವರ್ಷಗಳು
2. ಸ್ಟೆನೋಗ್ರಾಫರ್ (ಗ್ರೇಡ್ ಡಿ) ಹುದ್ದೆಗಳಿಗೆ 27 ವರ್ಷಗಳು.
ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 03 ವರ್ಷಗಳು
* SC / ST ಅಭ್ಯರ್ಥಿಗಳಿಗೆ 05 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತ ಅರ್ಹ ಅಭ್ಯರ್ಥಿಗಳು ನೇರವಾಗಿ SSC ಅಧಿಕೃತ ವೆಬ್ಸೈಟ್ https://ssc.nic.in ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು
* ಕೇಳಿರುವ ಎಲ್ಲಾ ವೈಯಕ್ತಿಕ ವಿವರಗಳನ್ನು ಸರಿಯಾಗಿ ನಮೂದಿಸಿ ಪೂರಕ ದಾಖಲೆಗಳ ವಿವರಗಳನ್ನು ಕೂಡ ಸೂಚನೆಯಂತೆ ಭರ್ತಿ ಮಾಡಬೇಕು
* ನಿಮ್ಮ ವರ್ಗಕ್ಕೆ ಅನುಗುಣವಾದ ಅರ್ಜಿ ಶುಲ್ಕವನ್ನು ಕೂಡ ಪಾವತಿಸಿ ರಸೀದಿ ಮತ್ತು ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಬೇಕು
ಅರ್ಜಿ ಶುಲ್ಕ:-
* ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಅಥವಾ UPI ಆಧಾರಿತ ಆಪ್ ಮೂಲಕ ಪಾವತಿ ಮಾಡಬಹುದು
* SC/ST, ಅಂಗವಿಕಲ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
* ಇತರೆ ಅಭ್ಯರ್ಥಿಗಳಿಗೆ ರೂ.100
ಆಯ್ಕೆ ವಿಧಾನ:-
* ಕಂಪ್ಯೂಟರ್ ಆಧಾರಿತ ಪರೀಕ್ಷೆ
* ಕೌಶಲ್ಯ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ನೇರ ಸಂದರ್ಶನ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 26 ಜುಲೈ , 2024
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 17 ಆಗಸ್ಟ್, 2024
* ಶುಲ್ಕ ಪಾವತಿಸಲು ಕೊನೆಯ ದಿನಾಂಕ – 18 ಆಗಸ್ಟ್, 2024
* ಕಂಪ್ಯೂಟರ್ ಆಧಾರಿತ ಪರೀಕ್ಷೆ – ಅಕ್ಟೋಬರ್-ನವೆಂಬರ್, 2024.