Subsidy
ನಿರುದ್ಯೋಗ(Unemployment) ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ(Self Employed) ಆರಂಭಿಸಲು ಸಾಲ ಸೌಲಭ್ಯ(Loan facility)ದ ಜೊತೆಗೆ ಸಹಾಯಧನ(Subsidy) ನೀಡಲು ಹಿಂದುಳಿದ ವರ್ಗ(Backward class)ಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ(Loan) ಹಾಗೂ ಸಹಾಯಧನ ಸೌಲಭ್ಯ(Subsidy facility)ವನ್ನು ನೀಡಲು ಅರ್ಜಿ(Application) ಆಹ್ವಾನಿಸಲಾಗಿದೆ.
ಯಾವ ನಿಗಮಗಳಿಂದ ನೇರ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಾಖಲಾತಿಗಳು ಹಾಗೂ ಅರ್ಹತೆಗಳ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಕೊನೆವರೆಗೂ ಈ ಲೇಖನವನ್ನು ಓದಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಡಿ(karnataka mahila nigama) ಸ್ವ-ಉದ್ಯೋಗ(self employment) ಆರಂಭಿಸಲು 30,000 ಸಾವಿರ ರೂ. ಸಹಾಯಧನ ನೀಡಲು ಆಸಕ್ತಿಯಿರುವ ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ಸುದ್ದಿ ಓದಿ:- Jio: ಜಿಯೋ ಸಿಮ್ ಬಳಕೆದಾರರಿಗೆ ಗುಡ್ ನ್ಯೂಸ್.!
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಫಲಾನುಭವಿಗಳು ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಧನ್ಯಶ್ರೀ(dhanya shree) ಮತ್ತು ಚೇತನ(chenata yojane) ಯೋಜನೆಯಡಿಯಲ್ಲಿ 30,000 ರೂ. ಅರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಲು 21 ಸೆಪ್ಟಂಬರ್ 2024 ಕೊನೆಯ ದಿನಾಂಕವಾಗಿದ್ದು ಅರ್ಹ ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) ಫೋಟೋ
3) ಬ್ಯಾಂಕ್ ಪಾಸ್ ಬುಕ್
4) ರೇಷನ್ ಕಾರ್ಡ್
5) ಸ್ವ-ಉದ್ಯೋಗದ ಪೂರಕ ದಾಖಲೆಗಳು
6) ಚಟುವಟಿಕೆಯ ಯೋಜನಾ ವರದಿ
7) ವಾಸ ದೃಢೀಕರಣ ಪ್ರಮಾಣ ಪತ್ರ
ಅರ್ಜಿ ಸಲ್ಲಿಕೆ ವಿಧಾನ
ಅರ್ಹ ಫಲಾನುಭವಿಗಳು ಅಗತ್ಯ ಪೂರಕ ದಾಖಲೆಗಳ ಸಮೇತ ಸೇವಾ ಸಿಂಧು ಪೋರ್ಟಲ್ (Seva Sindhu Portal) ಮತ್ತು ನಿಮ್ಮ ಹತ್ತಿರದ ಗ್ರಾಮ ಒನ್(Nearest Village One), ಕರ್ನಾಟಕ ಒನ್(Karnataka One), ಬೆಂಗಳೂರು ಒನ್ ಕೇಂದ್ರ(Bangalore One Center)ವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
1) ಅರ್ಜಿದಾರರು ಕರ್ನಾಟಕ ಖಾಯಂ ನಿವಾಸಿಗಳಾಗಿರಬೇಕು.
2) ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅರ್ಜಿದಾರರು ತಮ್ಮ ಮನೆಯಲ್ಲೇ ಕುಳಿತುಕೊಂಡು ಮೊಬೈಲ್ ಮೂಲಕ ಪೂರಕ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಸೇವಾ ಸಿಂಧು ವೆಬ್ಸೈಟ್ ಅನ್ನು ಭೇಟಿ ಮಾಡಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಸೇವಾ ಸಿಂಧು ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
Step-2: ತದನಂತರ ಮೊದಲ ಬಾರಿಗೆ ಈ ವೆಬ್ಸೈಟ್ ಪ್ರವೇಶ ಮಾಡುತ್ತಿದ್ದಲ್ಲಿ ‘New user ? Register here’ ಬಟನ್ ಮೇಲೆ ಕ್ಲಿಕ್ ಮಾಡಿ ನೋಂದಣಿ ಮಾಡಿಕೊಂಡು User ID ಮತ್ತು password ಹಾಕಿ ಲಾಗಿನ್ ಅಗಬೇಕು.
Step-3: ಬಳಿಕ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಪೂರಕ ದಾಖಲೆಗಳನ್ನು ಅಪ್ಲೋಡ್ ಮಾಡಿ ‘submit’ ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಈ ಸುದ್ದಿ ಓದಿ:- Childrens Aadhaar: ಮಕ್ಕಳ ಆಧಾರ್ ಕಾರ್ಡ್ ಅಪ್ಡೇಟ್ ಕಡ್ಡಾಯ.! ಸರ್ಕಾರದಿಂದ ಬಂತು ಹೊಸ ರೂಲ್ಸ್
ಸಹಾಯವಾಣಿ: 080-26632973
ಅಧಿಕೃತ ವೆಬ್ಸೈಟ್- Click here