SBI ಬ್ಯಾಂಕ್ & PNB ಬ್ಯಾಂಕ್‌ನೊಂದಿಗಿನ ವಹಿವಾಟು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ.!

Bank

ರಾಜ್ಯ ಸರ್ಕಾರ(State Govt)ಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆ(Dept), ಸಂಸ್ಥೆಗಳು(Institutions)ಭಾರತೀಯ ಸ್ಟೇಟ್‌ ಬ್ಯಾಂಕ್‌ (State Bank of India- SBI) ಹಾಗೂ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ (Punjab National Bank- PNB) ಸದ್ಯ ಹೊಂದಿರುವ ಎಲ್ಲ ಖಾತೆಗಳನ್ನು(accounts) ತಕ್ಷಣವೇ ಬರಖಾಸ್ತುಗೊಳಿಸಬೇಕು.

ಜತೆಗೆ ಇನ್ನು ಮುಂದೆ ಉಭಯ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಠೇವಣಿ(deposit), ಹೂಡಿಕೆ(Investment) ಸೇರಿದಂತೆ ವ್ಯವಹಾರ(business) ಮಾಡಬಾರದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಹೌದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ (PNB) ನೊಂದಿಗಿನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಿ ಕರ್ನಾಟಕ ರಾಜ್ಯ ಸರ್ಕಾರ(Karnataka State Govt) ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now

ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಅನುಮೋದಿಸಿರುವ ಮತ್ತು ಹಣಕಾಸು ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ ಈ ಬ್ಯಾಂಕ್‌ಗಳಲ್ಲಿನ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ತಕ್ಷಣವೇ ಮರುಪಡೆಯಲು ರಾಜ್ಯದ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಇತರ ಸಂಸ್ಥೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ತಕ್ಷಣವೇ ಮುಕ್ತಾಯಗೊಳಿಸಬೇಕು. ಈ ಬ್ಯಾಂಕ್‌ಗಳಲ್ಲಿ ಯಾವುದೇ ಹೆಚ್ಚಿನ ಠೇವಣಿ ಅಥವಾ ಹೂಡಿಕೆಗಳನ್ನು ಮಾಡಬಾರದು ಎಂದು ತಿಳಿಸಲಾಗಿದೆ.

ಠೇವಣಿ, ಮರುಪಾವತಿ ಪ್ರಕ್ರಿಯೆಯಲ್ಲಿನ ವಂಚನೆ, ಅಕ್ರಮ ಪ್ರಕರಣಗಳ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಯೊಂದಿಗೆ ಆರ್ಥಿಕ ಇಲಾಖೆ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಪಿಸಿ ಜಾಫರ್‌ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ.

ಅದರಂತೆ ರಾಜ್ಯ ಸರಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಕೂಡಲೇ ಎಸ್‌ಬಿಐ ಹಾಗೂ ಪಿಎನ್‌ಬಿ ಬ್ಯಾಂಕ್‌ಗಳಲ್ಲಿನ ಖಾತೆಗಳನ್ನು ಬರಖಾಸ್ತುಗೊಳಿಸಬೇಕು. ಹಾಗೆಯೇ ಇನ್ನು ಮುಂದೆ ಆ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಠೇವಣಿ, ಹೂಡಿಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸರ್ಕಾರದ ಹಣ ದುರುಪಯೋಗ ಮತ್ತು ಅಕ್ರಮ ವಹಿವಾಟಿನ ಆರೋಪಗಳ ನಡುವೆ ಈ ಆದೇಶ ಹೊರಬಿದ್ದಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತವನ್ನು ಒಳಗೊಂಡಿರುವ ಆರೋಪದ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ರಾಜಕೀಯ ಜಗಳದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಖಾತೆಗಳ ಅಧೀಕ್ಷಕ ಚಂದ್ರಶೇಖರ್ ಪಿ ಮೇ 26 ರಂದು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರು.

ನಿಗಮಕ್ಕೆ ಸೇರಿದ ₹187 ಕೋಟಿಯನ್ನು ಅನುಮತಿಯಿಲ್ಲದೆ ವರ್ಗಾಯಿಸಲಾಗಿದೆ ಮತ್ತು ಒಟ್ಟು ಮೊತ್ತದಲ್ಲಿ ₹88.62 ಕೋಟಿಯನ್ನು ಹೈದರಾಬಾದ್ ಮೂಲದ ಐಟಿ ಕಂಪನಿಗಳು ಮತ್ತು ಸಹಕಾರಿ ಬ್ಯಾಂಕ್‌ಗೆ ಸೇರಿದ ಇತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ವಂಚನೆ ಪ್ರಕರಣಗಳ ಎಫೆಕ್ಟ್

ಕೆಐಎಡಿಬಿಯು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನ ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು 2011ರ ಸೆ.14ರಂದು ಚೆಕ್‌ ಮೂಲಕ 25 ಕೋಟಿ ರೂ. ಪಾವತಿಸಿತ್ತು. ಅದಕ್ಕೆ ಪ್ರತಿಯಾಗಿ ಅದೇ ಬ್ಯಾಂಕ್‌ನ ಸೇಲಂನ ಶಂಕ್ರೀ ಬ್ಯಾಂಕ್‌ನಿಂದ 12 ಕೋಟಿ ರೂ.ಗಳ ಒಂದು ನಿಶ್ಚಿತ ಠೇವಣಿಯ ರಸೀದಿ ಹಾಗೂ 13 ಕೋಟಿ ರೂ.ಗಳ ಮತ್ತೊಂದು ನಿಶ್ಚಿತ ಠೇವಣಿ ರಸೀದಿ ನೀಡಿತ್ತು.

ಅವಧಿ ಮುಕ್ತಾಯದ ನಂತರ 13 ಕೋಟಿ ರೂ.ಗಳ ಠೇವಣಿಯ ಮೊತ್ತ ನಗದೀರಕರಣವಾಗಿತ್ತು. ಆದರೆ ಎರಡನೇ ಖಾತೆಯ 12 ಕೋಟಿ ರೂ. ಠೇವಣಿ ಸಂಬಂಧ ಬ್ಯಾಂಕ್‌ ಅಧಿಕಾರಿಗಳಿಂದ ನಡೆದಿದೆ ಎನ್ನಲಾದ ವಂಚನೆ ಪ್ರಕರಣದಿಂದಾಗಿ ಆ ಮೊತ್ತವನ್ನು ಬ್ಯಾಂಕ್‌ ಈವರೆಗೆ ಕೆಐಎಡಿಬಿಗೆ ಮರುಪಾವತಿಸಿಲ್ಲ. ಈ ಸಂಬಂಧ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ, ಸಭೆ ನಡೆಸಿದರೂ ಪ್ರಯೋಜನವಾಗಿಲ್ಲ. ಪ್ರಕರಣವು 10 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment