Union
ರಾಜ್ಯದಾದ್ಯಂತ ಇರುವ ಎಲ್ಲಾ ನಿರುದ್ಯೋಗಿಗಳಿಗೆ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಬಯಸುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ, ಯೂನಿಯನ್ ಬ್ಯಾಂಕ್ ವತಿಯಿಂದ ಸಿಹಿ ಸುದ್ದಿ ಇದೆ. ಅದೇನೆಂದರೆ. ಯೂನಿಯನ್ ಬ್ಯಾಂಕ್ ತನ್ನಲ್ಲಿ ಖಾಲಿ ಇರುವ 1500 ಹೆಚ್ಚು ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಡಿಮೆ ಕೆಲಸದ ಒತ್ತಡ, ಉತ್ತಮ ವೇತನ ಶ್ರೇಣಿಯೊಂದಿಗೆ ಹೆಚ್ಚಿನ ರಜಾ ಅವಕಾಶ ಹಾಗೂ ಇತರೆ ಅನುಕೂಲತೆಗಳು ಕೂಡ ಸೇರಿರುವುದರಿಂದ ಸಹಜವಾಗಿ , ಎಲ್ಲರನ್ನು ಸೆಳೆಯುವ ಕ್ಷೇತ್ರ ಇದಾಗಿದೆ. ನೀವು ಕೂಡ ಈ ಬಗ್ಗೆ ಆಸಕ್ತಿ ಹೊಂದಿದ್ದರೆ ತಪ್ಪದೇ ಅರ್ಜಿ ಸಲ್ಲಿಸಿ ಮತ್ತು ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ಓದಿ.
ಉದ್ಯೋಗ ಸಂಸ್ಥೆ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India)
ನೇಮಕಾತಿ ಸಂಸ್ಥೆ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India)
ಹುದ್ದೆ ಹೆಸರು:- ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳು ( LBOS JMGS-1)
ಒಟ್ಟು ಹುದ್ದೆಗಳ ಸಂಖ್ಯೆ:- 1500 ಹುದ್ದೆಗಳು
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ. 48,480 ರಿಂದ ರೂ.85920 ವೇತನ ಇದರೊಂದಿಗೆ ಇನ್ನಿತರ ಸವಲತ್ತುಗಳು ಕೂಡ ಸಿಗುತ್ತವೆ
ಉದ್ಯೋಗ ಸ್ಥಳ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳು ಭಾರತದಾದ್ಯಂತ ಇರುವ ಯಾವುದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ರಾಂಚ್ ನಲ್ಲಿ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು
ಶೈಕ್ಷಣಿಕ ವಿದ್ಯಾರ್ಹತೆ:-
ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ವಿದ್ಯಾಭ್ಯಾಸ ಪೂರ್ತಿಗೊಳಿಸಿದ ಅಭ್ಯರ್ಥಿಗಳು ಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ – 20 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ – 30 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* SC/ST ಅಭ್ಯರ್ಥಿಗಳಿಗೆ 5 ವರ್ಷಗಳು
* PwBD (Gen/EWS) ಅಭ್ಯರ್ಥಿಗಳಿಗೆ 10 ವರ್ಷಗಳು
* PwBD (SC / ST) ಅಭ್ಯರ್ಥಿಗಳಿಗೆ 15 ವರ್ಷಗಳು
* PwBD (OBC) ಅಭ್ಯರ್ಥಿಗಳಿಗೆ 13 ವರ್ಷಗಳು
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರವಾಗಿ ವಯೋಮಿತಿ ಸಡಿಲಿಕೆ ಇರುತ್ತದೆ
ಅರ್ಜಿ ಸಲ್ಲಿಸುವ ವಿಧಾನ:-
* https://unionbankofindia.co.in ಈ ವೆಬ್ಸೈಟ್ಗೆ ಗೆ ತೆರಳಿ ಆನ್ಲೈನ್ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬೇಕು
ಆಯ್ಕೆ ವಿಧಾನ:-
* ಬಹು ಅಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ
* ಲಿಖಿತ ಪರೀಕ್ಷೆ
* ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ನೇರ ಸಂದರ್ಶನ
* ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ
* ಸಾಮಾನ್ಯ/ EWS / OBC ಅಭ್ಯರ್ಥಿಗಳಿಗೆ ರೂ.850
* SC & ST / PwBD ಅಭ್ಯರ್ಥಿಗಳಿಗೆ ರೂ.175
ಅರ್ಜಿ ಸಲ್ಲಿಸುವ ವಿಧಾನ:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 24, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 13, 2024
* ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 13, 2024.